ಮಂಗಳೂರು ಬಿಷಪ್, ಆಸ್ಕರ್, ಪೂಜಾರಿ ಭೇಟಿ ಮಾಡಿದ ಡಿ.ಕೆ.ಶಿವಕುಮಾರ್
ಪಕ್ಷ ಸಂಘಟನೆಯ ಬಗ್ಗೆ ಆಸ್ಕರ್ ಫೆರ್ನಾಂಡಿಸ್ ಅವರಿಂದ ಸಲಹೆ ಪಡೆದರು.
ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಕರಾವಳಿ ಕರ್ನಾಟಕ ವರದಿ
ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರನ್ನು ನಗರದ ಮೇರಿಹಿಲ್ನಲ್ಲಿ ನಿವಾಸದಲ್ಲಿ ಭೇಟಿ ಮಾಡಿದರು.
ಶಿವಕುಮಾರ್ ಆಸ್ಕರ್ ಅವರ ಆರೋಗ್ಯ ವಿಚಾರಿಸಿದರು. ಪಕ್ಷ ಸಂಘಟನೆಯ ಬಗ್ಗೆ ಅವರಿಂದ ಸಲಹೆ ಪಡೆದರು.
ಬಿಷಪ್ ಹೌಸ್ಗೆ ಭೇಟಿ ನೀಡಿ ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನಾ ಅವರನ್ನು ಭೇಟಿ ಮಾಡಿದರು.

ಕೋವಿಡ್ ವಾರಿಯರ್ಸ್ ಆಗಿ ಸೇವೆಗೈಯುತ್ತಿರುವ ಪಕ್ಷದ ಅರವತ್ತು ಮಂದಿ ಪ್ರತಿನಿಧಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಶಾಸಕ ಯು.ಟಿ. ಖಾದರ್, ಮಾಜಿ ಸಂಸದ ವಿನಯ ಕುಮಾರ ಸೊರಕೆ, ಮಾಜಿ ಸಚಿವ ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕ ಜೆ. ಆರ್. ಲೋಬೊ, ಐವನ್ ಡಿ’ಸೋಜ, ಯು.ಆರ್.ಸಭಾಪತಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಮತ್ತಿತರರು ಜೊತೆಗಿದ್ದರು.