ಚನ್ನರಾಯಪಟ್ಟಣ ಪಿಎಸ್‌ಐ ಕಿರಣ್ ಕುಮಾರ್ ಆತ್ಮಹತ್ಯೆ

ಕೊಲೆ ಆರೋಪಿಗಳ ಶೋಧದಲ್ಲಿ ತೊಡಗಿದ್ದ ಕಿರಣ್ ಕುಮಾರ್.

ಕೊಲೆ ಪ್ರಕರಣ ಸಂಬಂಧ ಕಾನೂನು ಪ್ರಕ್ರಿಯೆ ಮುಗಿಸಿ ಬೆಳಿಗ್ಗೆ ಒಂಬತ್ತು ಗಂಟೆಗೆ ಮನೆ ತಲುಪಿದ್ದರು.

ಕರಾವಳಿ ಕರ್ನಾಟಕ ವರದಿ
ಹಾಸನ: ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್‌ಐ ಕಿರಣ್ ಕುಮಾರ್ ಸಮವಸ್ತ್ರದಲ್ಲೇ ಮನೆಯಲ್ಲೇ ಬೆಳಿಗ್ಗೆ ಆತ್ಮಹತ್ಯೆಗೈದಿದ್ದಾರೆ. ಮನೆಯಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದ ಕಿರಣ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಮೃತದೇಹ ಚನ್ನರಾಯಪಟ್ಟಣ ಸರಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ.

ಚನ್ನರಾಯಪಟ್ಟಣದಲ್ಲಿ ಎರಡು ಕೊಲೆ ಸಂಭವಿಸಿತ್ತು. ಆರೋಪಿಗಳ ಶೋಧದಲ್ಲಿ ತೊಡಗಿದ್ದ ಕಿರಣ್ ಕುಮಾರ್ ಅವರು ಕೊಲೆ ಪ್ರಕರಣ ಸಂಬಂಧ ಕಾನೂನು ಪ್ರಕ್ರಿಯೆ ಮುಗಿಸಿ ಬೆಳಿಗ್ಗೆ ಒಂಬತ್ತು ಗಂಟೆಗೆ ಮನೆ ತಲುಪಿದ್ದರು.

ಆರೋಪಿಗಳನ್ನು ಬಂಧಿಸುವಲ್ಲಿ ರಾಜಕೀಯ ಒತ್ತಡ ಇತ್ತು ಎನ್ನಲಾಗಿದ್ದು, ಆತ್ಮಹತ್ಯೆಯ ನಿಖರ ಕಾರಣ ತಿಳಿದಿಲ್ಲ. ಎ‌ಎಸ್ಪಿ ನಂದಿನಿ, ಡಿವೈಎಸ್ಪಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇಂದು ಐಜಿ ಚನ್ನರಾಯಪಟ್ಟಣಕ್ಕೆ ಭೇಟಿ ನೀಡುವವರಿದ್ದರು.

Get real time updates directly on you device, subscribe now.