ಐವನ್ ಡಿ’ಸೋಜಾಗೆ ಕೊರೋನಾ: ಶಾಸಕ ಖಾದರ್ ಸ್ವಯಂ ನಿರ್ಬಂಧ

ಐವನ್ ಡಿಸೋಜಾ ಜೊತೆ ಪ್ರಾಥಮಿಕ‌ ಸಂಪರ್ಕದಲ್ಲಿದ್ದ ಕಾರಣ ಕೆಲ‌ವು ದಿನಗಳ ಕಾಲ ಸ್ವಯಂ‌ ನಿರ್ಬಂಧ.

ಐವನ್ ಡಿಸೋಜಾ ಜೊತೆಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಕೆಮ್ಮು ಜ್ವರ ಮುಂತಾದ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ.

ಕರಾವಳಿ ಕರ್ನಾಟಕ ವರದಿ
ಮಂಗಳೂರು: ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ ಅವರಿಗೆ ಕೋವಿಡ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಶಾಸಕ ಯು.ಟಿ.ಖಾದರ್ ಅವರು ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಈ ಬಗ್ಗೆ ಖಾದರ್ ಅವರು ಮಾಹಿತಿ ನೀಡಿದ್ದಾರೆ.

ಐವನ್ ಡಿ’ಸೋಜಾ ಹಾಗೂ ಲಕ್ಷಾಂತರ ಮಂದಿ ಕೋವಿಡ್ ಸೋಂಕಿತರಾಗಿರಾಗಿದ್ದಾರೆ. ಇವರೆಲ್ಲರು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

ಕೆಲ ದಿನಗಳಿಂದ ಐವನ್ ಡಿಸೋಜಾ ಅವರ ಜೊತೆ ಪ್ರಾಥಮಿಕ‌ ಸಂಪರ್ಕದಲ್ಲಿದ್ದ ಕಾರಣ ನಾನು ಕೆಲ‌ವು ದಿನಗಳ ಕಾಲ ಸ್ವಯಂ‌ ನಿರ್ಬಂಧ ಹಾಕಿಕೊಂಡಿದ್ದೇನೆ. ಹೀಗಾಗಿ ಇಂದು ನಿಗದಿಯಾಗಿದ್ದ ಜನ ಸಾಮಾನ್ಯರ ಭೇಟಿ, ಕ್ಷೇತ್ರದ ಅಭಿವೃದ್ದಿ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆಗಿನ ಸಭೆ , ಕ್ಷೇತ್ರದಲ್ಲಿ‌ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳು ಮುಂದೂಡಲ್ಪಟ್ಟಿವೆ.

ಜನ ಸಾಮಾನ್ಯರ ಸೇವೆಗೆ ದೂರವಾಣಿ ಮೂಲಕ‌ ಲಭ್ಯವಿದ್ದು ಅಗತ್ಯವಿದ್ದಲ್ಲಿ ನೇರವಾಗಿ ದೂರವಾಣಿ ಮೂಲಕ ನನ್ನನ್ನ ಎಂದಿನಂತೆ ಸಂಪರ್ಕಿಸಬಹುದಾಗಿದೆ ಎಂದು ಖಾದರ್ ತಿಳಿಸಿದ್ದಾರೆ.

ಇದೇ ವೇಳೆ ಐವನ್ ಡಿಸೋಜಾ ಜೊತೆಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಕೆಮ್ಮು ಜ್ವರ ಮುಂತಾದ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.

Get real time updates directly on you device, subscribe now.