ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
ಉಡುಪಿ, ಉತ್ತರ ಕನ್ನಡ ಜಿಲ್ಲೆ ‘ಎ’ ಗ್ರೇಡ್ ಪಡೆದ ಜಿಲ್ಲೆಗಳ ಪಟ್ಟಿಯಲ್ಲಿವೆ.
ಸುಳ್ಯದ ಕುಮಾರಸ್ವಾಮಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿ ಅನುಷ್ ಎ.ಎಲ್ ಸೇರಿದಂತೆ ಎಂಟು ಮಂದಿ ಶೇ.100ಅಂಕ ಗಳಿಸಿದ್ದಾರೆ.
ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ರಾಜ್ಯ ಎಸ್ಎಸ್ಎಲ್‌ಸಿ ಪರೀಕ್ಷಾ ಫಲಿತಾಂಶಗಳು ಪ್ರಕಟವಾಗಿದ್ದು, ಈ ಬಾರಿ 5.82ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪ್ರತೀ ಬಾರಿಯಂತೆಯೂ ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಈ ಬಾರಿ ಜಿಲ್ಲೆಗಳಿಗೆ ರ್ಯಾಂಕಿಗ್ ಬದಲು ಎ, ಬಿ,ಸಿ ಎಂದು ಗ್ರೇಡ್ ನೀಡಲಾಗಿದೆ. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮಧುಗಿರಿ, ಮಂಡ್ಯ, ಕೋಲಾರ, ಚಿತ್ರದುರ್ಗ, ಉಡುಪಿ, ರಾಮನಗರ, ಹಾಸನ ಉತ್ತರ ಕನ್ನಡ ಜಿಲ್ಲೆ ‘ಎ’ ಗ್ರೇಡ್ ಪಡೆದಿವೆ.
ಸುಳ್ಯದ ಕುಮಾರಸ್ವಾಮಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿ ಅನುಷ್ ಎ.ಎಲ್ ಸೇರಿದಂತೆ ಎಂಟು ಮಂದಿ ಶೇ.100ಅಂಕ ಗಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಎಸ್ಎಂಎಸ್ ಮೂಲಕ ಫಲಿತಾಂಶದ ಸಂದೇಶ ಕಳುಹಿಸಲಾಗುತ್ತಿದ್ದು, ಮಂಗಳವಾರ ಬೆಳಿಗ್ಗೆ ಆಯಾ ಶಾಲೆಗಳಲ್ಲಿಯೂ ಫಲಿತಾಂಶ ನೋಡಬಹುದು.