ಸೆ.10ರವರೆಗೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಚೆಂಬರ್ 8ರವರೆಗೆ ಆರೆಂಜ್ ಆಲರ್ಟ್.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ  ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯಲ್ಲೋ ಆಲರ್ಟ್.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಇಂದಿನಿಂದ ಸೆಪ್ಟೆಂಬರ್ 10ರವರೆಗೆ ಕರಾವಳಿ ಕರ್ನಾಟಕ ಭಾಗದಲ್ಲಿ ಭಾರೀ ಮಳೆ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ  ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯಲ್ಲೋ ಆಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಭಾಗದಲ್ಲೂ ತಕ್ಕಮಟ್ಟಿಗೆ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಚೆಂಬರ್ 8ರವರೆಗೆ ಆರೆಂಜ್ ಆಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಧಾರಾವಾಡ, ಗದಗ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Get real time updates directly on you device, subscribe now.