ಕಮಿಷನ್ ದಂಧೆ: ಸಿಎಂ ಪುತ್ರ ವಿಜಯೇಂದ್ರ ವಿರುದ್ಧ ಡಿಐಜಿಗೆ ಜನಾಧಿಕಾರ ಸಂಘರ್ಷ ಪರಿಷತ್ ದೂರು

ವಸತಿ ಸಮುಚ್ಛಯ ನಿರ್ಮಾಣದ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪೆನಿಯಿಂದ ನಗದು ಮತ್ತು ಆರ್‌ಟಿಜಿಎಸ್ ಮೂಲಕ ಕೋಟ್ಯಂತರ ರೂ. ಕಮಿಷನ್ ಸುಲಿಗೆ ಮಾಡಿದ್ದಾರೆ.

ಪ್ರಕರಣದಲ್ಲಿ ಸಿಎಂ ಪುತ್ರ ಪ್ರಮುಖ ಪಾತ್ರ ವಹಿಸಿರುವುದರಿಂದ ಐಪಿಸಿ ಸೆಕ್ಷನ್ ದಾಖಲಿಸಿ ತನಿಖೆಗೆ ಜನಾಧಿಕಾರ ಸಂಘರ್ಷ ಪರಿಷತ್ ಆಗ್ರಹಿಸಿದೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬಹುಮಹಡಿ ಸಮುಚ್ಛಯ ನಿರ್ಮಾಣ ಕಂಪೆನಿಯಿಂದ ಕೋಟ್ಯಂತರ ರೂ. ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಹಾಗೂ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ, ಶಶಿಧರ್ ಮರಡಿ ಸೇರಿದಂತೆ ಇತರ ಸಹಚರರ ವಿರುದ್ಧ ಸುಲಿಗೆ ಮತ್ತು ಕ್ರಿಮಿನಲ್ ಸಂಚು ಆರೋಪದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ, ಬೆಂಗಳೂರು ಪೊಲೀಸ್ ಕಮಿಷನರ್ ಹಾಗೂ ಶೇಷಾದ್ರಿಪುರಂ ಠಾಣಾಧಿಕಾರಿಗೆ ಜನಾಧಿಕಾರ ಸಂಘರ್ಷ ಪರಿಷತ್ ಲಿಖಿತ ದೂರು ನೀಡಿದೆ.

ವಸತಿ ಸಮುಚ್ಛಯ ನಿರ್ಮಾಣದ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪೆನಿಯಿಂದ ನಗದು ಮತ್ತು ಆರ್‌ಟಿಜಿಎಸ್ ಮೂಲಕ ಕೋಟ್ಯಂತರ ರೂ. ಕಮಿಷನ್ ಸುಲಿಗೆ ಮಾಡಿದ್ದಾರೆ ಎಂದು ದೂರಿನಲ್ಲಿ ಜನಾಧಿಕಾರ ಸಂಘರ್ಷ ಪರಿಷತ್ ವಿವರಿಸಿದೆ.

ಪ್ರಕರಣದಲ್ಲಿ ಸಿಎಂ ಪುತ್ರ ಪ್ರಮುಖ ಪಾತ್ರ ವಹಿಸಿರುವುದರಿಂದ ಐಪಿಸಿ ಸೆಕ್ಷನ್ ದಾಖಲಿಸಿ ತನಿಖೆಗೆ ಜನಾಧಿಕಾರ ಸಂಘರ್ಷ ಪರಿಷತ್ ಆಗ್ರಹಿಸಿದೆ.

Get real time updates directly on you device, subscribe now.