ಉದ್ಯಾವರ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಿತೇಶ್ ಸುವರ್ಣ

ಮಾಜಿ ಸಚಿವ ವಿನಯಕುಮಾರ್ ಸೊರಕೆ ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಭೆಯಲ್ಲಿ ಮಿತೇಶ್ ಸುವರ್ಣ ಆಯ್ಕೆಯನ್ನು ಘೋಷಿಸಿದರು.

ಮಿತೇಶ್ ಸುವರ್ಣ ನಿಕಟ ಪೂರ್ವಗ್ರಾಮ ಪಂಚಾಯತ್ ಸದಸ್ಯರಾಗಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ಉತ್ಸಾಹದಿಂದ ಸೇವೆ ಸಲ್ಲಿಸುತ್ತಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಉದ್ಯಾವರ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಯುವ ಮುಖಂಡ ಮಿತೇಶ್ ಸುವರ್ಣ ಆಯ್ಕೆಯಾಗಿದ್ದಾರೆ. ಮಿತೇಶ್ ಸುವರ್ಣ ನಿಕಟ ಪೂರ್ವಗ್ರಾಮ ಪಂಚಾಯತ್ ಸದಸ್ಯರಾಗಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ಉತ್ಸಾಹದಿಂದ ಸೇವೆ ಸಲ್ಲಿಸುತ್ತಿದ್ದಾರೆ.

ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಶಿಫಾರಸಿನ ಮೇರೆಗೆ ಯುವ ಕಾಂಗ್ರೆಸ್ ಉಪಾಧ್ಯಕ್ಷ ಚರಣ್ ವಿಠಲ್ ಸಮ್ಮುಖದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆಯವರು ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಭೆಯಲ್ಲಿ ಮಿತೇಶ್ ಸುವರ್ಣ ಆಯ್ಕೆಯನ್ನು ಘೋಷಿಸಿದರು. ಈ ಸಂದರ್ಭ ಅಧ್ಯಕ್ಷರಾದ ಗಿರೀಶ್ ಕುಮಾರ್ ಉಪಸ್ಥಿತರಿದ್ದರು.

Get real time updates directly on you device, subscribe now.