ಬಾಬರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ ಸೇರಿ ಎಲ್ಲ ಆರೋಪಿಗಳೂ ದೋಷಮುಕ್ತ

'ಬಾಬರಿ ಮಸೀದಿ ಧ್ವಂಸ ಕ್ರಿಮಿನಲ್ ಪಿತೂರಿಯಾಗಿರಲಿಲ್ಲ, ಕೃತ್ಯವು ಪೂರ್ವನಿಯೋಜಿತವಾಗಿರಲಿಲ್ಲ' ಎಂದ ಸಿಬಿಐ ವಿಶೇಷ ನ್ಯಾಯಾಲಯ.

ಆರೋಪಿಗಳ ಪೈಕಿ ಎಲ್.ಕೆ.ಅಡ್ವಾಣಿ, ಉಮಾ ಭಾರತಿ, ಕಲ್ಯಾಣ್ ಸಿಂಗ್, ಎಂಎಂ ಜೋಶಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.

ಕರಾವಳಿ ಕರ್ನಾಟಕ ವರದಿ
ನವದೆಹಲಿ: ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಸಮಾಜಘಾತುಕ ಶಕ್ತಿಗಳು ಮಸೀದಿ ಮೇಲೆ ಹತ್ತಿದ ಸಂದರ್ಭ ತಡೆಯಲು ಆರೋಪಿಗಳು ಯತ್ನಿಸಿದ್ದರು. ರಾಮ ಲಲ್ಲಾ ಮೂರ್ತಿ ಒಳಗೆ ಇದ್ದುದರಿಂದ ಅಶೋಕ್ ಸಿಂಘಾಲ್ ಮತ್ತು ಸಂಘಪರಿವಾರದ ಮುಖಂಡರು ಕಟ್ಟಡ ರಕ್ಷಿಸಲು ಯತ್ನಿಸಿದ್ದರು. ಸಿಬಿಐ ನೀಡಿದ ಆಡಿಯೋ, ವಿಡೀಯೊಗಳನ್ನು ದೃಢೀಕರಿಸಲು ಸಾಧ್ಯವಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಬಾಬರಿ ಮಸೀದಿ ಧ್ವಂಸ ಕ್ರಿಮಿನಲ್ ಪಿತೂರಿಯಾಗಿರಲಿಲ್ಲ, ಕೃತ್ಯವು ಪೂರ್ವನಿಯೋಜಿತವಾಗಿರಲಿಲ್ಲ ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್.ಕೆ.ಯಾದವ್ ಅವರು ಎಲ್ಲ 32 ಆರೋಪಿಗಳನ್ನು ದೋಷಮುಕ್ತಗೊಳಿಸಿದ್ದಾರೆ.

ಆರೋಪಿಗಳ ಪೈಕಿ ಎಲ್.ಕೆ.ಅಡ್ವಾಣಿ, ಉಮಾ ಭಾರತಿ, ಕಲ್ಯಾಣ್ ಸಿಂಗ್, ಎಂಎಂ ಜೋಶಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.

ವಿಶೇಷ ನ್ಯಾಯಾಲಯದ ಮುಂದೆ ಸಿಬಿಐ 600ದಾಖಲೆಗಳು, 351ಸಾಕ್ಷಿಗಳನ್ನು ಸಲ್ಲಿಸಿದ್ದು 48ಜನರ ವಿರುದ್ಧ ಆರೋಪಪಟ್ಟಿ ದಾಖಲಿಸಲಾಗಿತ್ತು. ವಿಚಾರಣೆ ಅವಧಿಯಲ್ಲಿ ಆರೋಪಿಗಳ ಪೈಕಿ ಹದಿನೇಳು ಮಂದಿ ಮೃತಪಟ್ಟಿದ್ದಾರೆ.

 

Get real time updates directly on you device, subscribe now.