‘ಯೋಗಿ ಆದಿತ್ಯನಾಥ ಕಾವಿಧಾರಿಗಳ ಪಾಲಿನ ಕಳಂಕ’: ಸಿದ್ದರಾಮಯ್ಯ

ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೇ ಹೆತ್ತವರನ್ನು ಗೋಳಾಡಿಸಿದ ಯೋಗಿ ಆದಿತ್ಯನಾಥ.

ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಯ ಹೊಣೆಯನ್ನು ಆದಿತ್ಯನಾಥ ಅವರನ್ನು ಬೆಂಬಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಸಮಸ್ತ ಸಂಘಪರಿವಾರ ಕೂಡ ಹೊರಬೇಕಾಗುತ್ತದೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೇ ಹೆತ್ತವರನ್ನು ಗೋಳಾಡಿಸಿದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕಾವಿಧಾರಿಗಳ ಪಾಲಿನ ಕಳಂಕ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇವರ ಆಡಳಿತದಲ್ಲಿ ಉತ್ತರಪ್ರದೇಶದ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ. ಮೊದಲು ಇವರನ್ನು ವಜಾ ಮಾಡಿ  ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೆ ಒಳಗಾಗಿ ಗಂಭೀರ ಗಾಯಗೊಂಡಿದ್ದ ಉತ್ತರಪ್ರದೇಶದ ಯುವತಿಯ ಅಂತ್ಯಸಂಸ್ಕಾರವನ್ನು ಪೊಲೀಸರು ಹೆತ್ತವರಿಗೂ ಅವಕಾಶ ನೀಡದೇ ರಾತ್ರೋರಾತ್ರಿ ನಡೆಸಿರುವ ಪೊಲೀಸರ ಕ್ರಮವನ್ನು ಸಿದ್ದರಾಮಯ್ಯ ತೀವೃವಾಗಿ ಖಂಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಯ ಹೊಣೆಯನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೊರಬೇಕಾಗುತ್ತದೆ. ಅವರನ್ನು ಬೆಂಬಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಸಮಸ್ತ ಸಂಘಪರಿವಾರ ಕೂಡ ಹೊರಬೇಕಾಗುತ್ತದೆ. ತಕ್ಷಣ ಯೋಗಿ ಆದಿತ್ಯನಾಥ್ ಅವರನ್ನು ಕಿತ್ತುಹಾಕಿ ಉತ್ತರಪ್ರದೇಶವನ್ನು ರಕ್ಷಿಸಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Get real time updates directly on you device, subscribe now.