ಸಚಿವ ಸ್ಥಾನಕ್ಕೆ ಸಿ.ಟಿ.ರವಿ ರಾಜೀನಾಮೆ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿರುವ ಹಿನ್ನೆಲೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು:  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿ. ಟಿ.ರವಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಸಚಿವರು ನೀಡುವ ಮೊದಲ ರಾಜೀನಾಮೆ ಇದಾಗಿದೆ.

ಸಿ.ಟಿ. ರವಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಪಕ್ಷದ ರಾಷ್ಟ್ರೀಯ ವರಿಷ್ಠರಿಗೆ ಮಾಹಿತಿ ರವಾನಿಸಿದ್ದಾರೆ.

ಸಚಿವ ಸ್ಥಾನಕ್ಕೆ ಸಿಟಿ ರವಿ ಸಲ್ಲಿಸಿದ್ದ ರಾಜಿನಾಮೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಇನ್ನೂ ಅಂಗೀಕರಿಸಿಲ್ಲ ಎಂದು ತಿಳಿದುಬಂದಿದೆ. ಒಬ್ಬರಿಗೆ ಒಂದೆ ಹುದ್ದೆ ಎಂಬಂತೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಸಿ.ಟಿ.ರವಿ ಅವರು ಮುಖ್ಯಮಂತ್ರಿ ಬಿ.ಎಸ್​ಯಡಿಯೂರಪ್ಪ ಅವರನ್ನು ಕಾವೇರಿಯಲ್ಲಿ ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿ.ಟಿ .ರವಿ ರಾಜೀನಾಮೆ ಬೆನ್ನಲ್ಲೇ ಸಂಪುಟ ಪುನಾರಚನೆಗೆ ಪಕ್ಷದಲ್ಲಿ ಚರ್ಚೆಗಳು ಗರಿಗೆದರಿವೆ.

 

Get real time updates directly on you device, subscribe now.