ಕುಂದಾಪುರ ರೈಲ್ವೇ ನಿಲ್ದಾಣದ ವಸತಿಗೃಹಗಳಲ್ಲಿ ಕಳ್ಳತನ: ಇಬ್ಬರ ಬಂಧನ

ಆರೋಪಿಗಳು ಕಳವುಗೈದ ಆಭರಣಗಳನ್ನು ಸೊಸೈಟಿಗಳಲ್ಲಿ ಅಡವಿಟ್ಟು ಹಣ ಹಂಚಿಕೊಳ್ಳುತ್ತಿದ್ದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಮತ್ತು ಸಹಾಯಕ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾರ್ಗದರ್ಶನದಲ್ಲಿ ಕುಂದಾಪುರ ವೃತ್ತನಿರೀಕ್ಷಕ ಗೋಪಿಕೃಷ್ಣ ಕೆ. ಆರ್ ಕಾರ್ಯಾಚರಣೆ.

ಕರಾವಳಿ ಕರ್ನಾಟಕ ವರದಿ
ಕುಂದಾಪುರ: ನಗರದ ಹೊರವಲಯದ ಕಾವ್ರಾಡಿ ಗ್ರಾಮದ ಮುಳ್ಳುಗುಡ್ಡೆ, ಬಸ್ರೂರು ಮತ್ತು ಕುಂದಾಪುರ ರೈಲ್ವೇ ನಿಲ್ದಾಣದ ವಸತಿಗೃಹಗಳಿಗೆ ನುಗ್ಗಿ ಚಿನ್ನಾಭರಣ ಕಳವುಗೈದ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಹೊನ್ನಾವರ ತಾಲೂಕಿನ ಮಂಕಿಯ ವಿಲ್ಸನ್ ಮತ್ತು ತೆಕ್ಕಟ್ಟೆಯ ಗಂಗಾಧರ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಕಳವುಗೈದ ಚಿನ್ನಾಭರಣ ಮತ್ತು ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿ ವಿಲ್ಸನ್ ಬಸ್ರೂರು ಮೇರ್ಡಿಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದು ಪರಿಸರದಲ್ಲಿ ಕಳ್ಳತನ ಮಾಡಿ ಚಿನ್ನಾಭರಣಗಳನ್ನು ಇನ್ನೋರ್ವ ಆರೋಪಿ ಗಂಗಾಧರನಿಗೆ ಕೊಡುತ್ತಿದ್ದ. ಆರೋಪಿಗಳು ಕಳವುಗೈದ ಆಭರಣಗಳನ್ನು ಸೊಸೈಟಿಗಳಲ್ಲಿ ಅಡವಿಟ್ಟು ಹಣ ಹಂಚಿಕೊಳ್ಳುತ್ತಿದ್ದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಮತ್ತು ಸಹಾಯಕ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರ ಮಾರ್ಗದರ್ಶನದಲ್ಲಿ ಕುಂದಾಪುರ ವೃತ್ತನಿರೀಕ್ಷಕ ಗೋಪಿಕೃಷ್ಣ ಕೆ. ಆರ್ ಅವರು ಕಾರ್ಯಾಚರಣೆ ನಡೆಸಿದ್ದರು.

ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿಗಳು, ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Get real time updates directly on you device, subscribe now.