ಡಿಕೆಶಿ ಮನೆ, ಕಚೇರಿಗೆ ದಾಳಿ; ಎಫ್‌ಐಆರ್ ದಾಖಲಿಸಿದ ಸಿಬಿಐ

ಡಿಕೆಶಿ ಸಹೋದರ ಡಿ.ಕೆ.ಸುರೇಶ್ ಕಚೇರಿಗಳ ಮೇಲೂ ಸಿಬಿಐ ದಾಳಿ ನಡೆಸಿದೆ.

ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಡಿಕೆಶಿ ವಿರುದ್ಧ ಸಿಬಿಐ ದಾಳಿಯನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಖಂಡಿಸಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ, ಕಚೇರಿಗಳ ಮೇಲೆ ಬೆಳಿಗ್ಗೆ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳು ಡಿಕೆಶಿ ವಿರುದ್ಧ ಸಿಬಿಐ ಬೆಂಗಳೂರು ಘಟಕದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ದೆಹಲಿಯ ನಾಲ್ಕು, ಮುಂಬೈಯ ಒಂದು ಮತ್ತು ಕರ್ನಾಟಕದ ಒಂಬತ್ತು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಶೋಧ ನಡೆಸಿದ್ದರು. ಡಿಕೆಶಿ ಸಹೋದರ ಡಿ.ಕೆ.ಸುರೇಶ್ ಕಚೇರಿಗಳ ಮೇಲೂ ಸಿಬಿಐ ದಾಳಿ ನಡೆಸಿದೆ.

ಡಿಕೆಶಿ ವಿರುದ್ಧ ಸಿಬಿಐ ದಾಳಿಯನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ವಕ್ತಾರೆ ಲಕ್ಷ್ಮೀ ಹೆಬ್ಬಾಳ್ಕರ್ ಖಂಡಿಸಿದ್ದು, ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಆರೋಪಿಸಿದ್ದಾರೆ.

Get real time updates directly on you device, subscribe now.