ಶಿವಮೊಗ್ಗ: ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಅರ್ಚಕನಿಗೆ 14ವರ್ಷ ಸಜೆ

ದಂಡದ ಹಣ ಸಂತ್ರಸ್ತೆಗೆ ನೀಡುವಂತೆ ಸೂಚಿಸಿದ್ದಾರೆ.

ಬಾಲಕಿಗೆ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಬರುವಂತೆ ಮಾಡುವುದಾಗಿ ಪುಸಲಾಯಿಸಿ ದೇವಸ್ಥಾನಕ್ಕೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾನೆ ಎಂದು ದೂರು ನೀಡಲಾಗಿತ್ತು.

ಕರಾವಳಿ ಕರ್ನಾಟಕ ವರದಿ
ಶಿವಮೊಗ್ಗ: ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಅರ್ಚಕನಿಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 14ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಧೀಶ ಕೆ. ಬಿ. ಶಿವಪ್ರಸಾದ್ ಅವರು ಅಪರಾಧಿಗೆ ಶಿಕ್ಷೆ ಮತ್ತು 25ಸಾವಿರ ದಂಡ ವಿಧಿಸಿ ತೀರ್ಪಿತ್ತಿದ್ದಾರೆ. ದಂಡದ ಹಣ ಸಂತ್ರಸ್ತೆಗೆ ನೀಡುವಂತೆ ಸೂಚಿಸಿದ್ದಾರೆ.

2016ರಲ್ಲಿ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಶಿವಕುಮಾರ ಬಾಲಕಿಗೆ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಬರುವಂತೆ ಮಾಡುವುದಾಗಿ ಪುಸಲಾಯಿಸಿ ದೇವಸ್ಥಾನಕ್ಕೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳಾ ಠಾಣೆಗೆ ದೂರು ನೀಡಲಾಗಿತ್ತು.

ಪೋಕ್ಸೊ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಸರಕಾರದ ಪರ ಅಭಿಯೋಜಕ ಕೆ.ಎಸ್.ಸತೀಶ್ ಅವರು ವಾದ ಮಂಡಿಸಿದ್ದರು.

 

Get real time updates directly on you device, subscribe now.