ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಅ.13ರ ತನಕ ಭಾರೀ ಮಳೆ ಸಾಧ್ಯತೆ

ಕರಾವಳಿಯ ದ.ಕ, ಉ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅ.9ರಿಂದ 13ರ ತನಕ ವ್ಯಾಪಕ ಮಳೆ.

ಅ.11ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಅ.10ರಿಂದ 13ರ ತನಕ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಕರಾವಳಿಯ ದ.ಕ, ಉ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅ.9ರಿಂದ 13ರ ತನಕ ವ್ಯಾಪಕ ಮಳೆಯಾಗಲಿದ್ದು, ಅ.11ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅ.20ರಿಂದ ಹಿಂಗಾರು ಮಳೆ ಆರಂಭವಾಗಲಿದ್ದು, ಕರಾವಳಿ ಮತ್ತು ಉತ್ತರ ಒಳನಾಡು ಭಾಗಕ್ಕಿಂತ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಬಿರುಸಿನಿಂದ ಬರಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

Get real time updates directly on you device, subscribe now.