ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ: ಗುಜರಾತ್ ಬಾಲಕ ಬಂಧನ

ಧೋನಿ ಪತ್ನಿ ಸಾಕ್ಷಿ ಸಿಂಗ್ ಅವರು ರಾಂಚಿ ಪೊಲೀಸರಿಗೆ ದೂರು ನೀಡಿದ್ದರು.

ಇನ್‌ಸ್ಟಾಗ್ರಾಂ ಮೂಲಕ ಬೆದರಿಕೆ ಒಡ್ಡಿದ ಬಾಲಕ ಹನ್ನೆರಡನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ.

ಕರಾವಳಿ ಕರ್ನಾಟಕ ವರದಿ
ಅಹಮದಾಬಾದ್: ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರ ಐದು ವರ್ಷದ ಮಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಅತ್ಯಾಚಾರದ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಗುಜರಾತ್ ಪೊಲೀಸರು ಹದಿನಾರು ವರ್ಷದ ಬಾಲಕನನ್ನು ಬಂಧಿಸಿದ್ದಾರೆ.

ಧೋನಿ ಪತ್ನಿ ಸಾಕ್ಷಿ ಸಿಂಗ್ ಅವರು ರಾಂಚಿ ಪೊಲೀಸರಿಗೆ ದೂರು ನೀಡಿದ್ದು, ಕಛ್ ಸಮೀಪದ ಮುಂದ್ರಾ ಗ್ರಾಮದ ನಿವಾಸಿ ಬಾಲಕನನ್ನು ಭಾನುವಾರ ಬಂಧಿಸಲಾಗಿದೆ.

ಇನ್‌ಸ್ಟಾಗ್ರಾಂ ಮೂಲಕ ಬೆದರಿಕೆ ಒಡ್ಡಿದ ಬಾಲಕ ಹನ್ನೆರಡನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಈತ ತಪ್ಪೊಪ್ಪಿಕೊಂಡಿದ್ದು, ಈತನನ್ನು ರಾಂಚಿ ಪೊಲೀಸರಿಗೆ ಹಸ್ತಾಂತರಿಸಲಾಗುತ್ತದೆ.

ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋತ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಲಾಗಿತ್ತು. ಧೋನಿಯ ಐದು ವರ್ಷದ ಮಗಳಿಗೆ ಅತ್ಯಾಚಾರ ಬೆದರಿಕೆ ಒಡ್ಡಿದ ಪ್ರಕರಣ ದೇಶಾದ್ಯಂತ ವ್ಯಾಪಕ ಟೀಕೆಗೆ ಒಳಗಾಗಿದ್ದು, ಜನರು ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

Get real time updates directly on you device, subscribe now.