ಬಿಜೆಪಿ ಸೇರಿದ ನಟಿ ಖುಷ್ಬೂ
ಬಿಜೆಪಿ ಪ್ರ. ಕಾರ್ಯದರ್ಶಿ, ತಮಿಳುನಾಡು ಉಸ್ತುವಾರಿ ಸಿ.ಟಿ.ರವಿ ಖುಷ್ಬೂ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಸರಿಯಾದ ದಿಕ್ಕಿನಲ್ಲಿ ದೇಶವನ್ನು ಕರೆದೊಯ್ಯಲು ಪ್ರಧಾನಿ ನರೇಂದ್ರ ಮೋದಿಯಂಥ ವ್ಯಕ್ತಿ ಅಗತ್ಯವಿದೆ ಎಂದು ಬಿಜೆಪಿ ಸೇರಿದ ಖುಷ್ಬೂ ಅವರು ಪ್ರತಿಕ್ರಿಯಿಸಿದ್ದಾರೆ.
ಕರಾವಳಿ ಕರ್ನಾಟಕ ವರದಿ
ನವದೆಹಲಿ: ನಿರೀಕ್ಷೆಯಂತೆಯೇ ಕಾಂಗ್ರೆಸ್ ಪಕ್ಷ ತೊರೆದಿದ್ದ ನಟಿ ಖುಷ್ಬೂ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಖುಷ್ಬೂ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಬಿಜೆಪಿ ಪ್ರ. ಕಾರ್ಯದರ್ಶಿ, ತಮಿಳುನಾಡು ಉಸ್ತುವಾರಿ ಸಿ.ಟಿ.ರವಿ ಖುಷ್ಬೂ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ದೇಶ ಅಭಿವೃದ್ಧಿ ಪಥದಲ್ಲಿ ಸಾಗುವ ನಿಟ್ಟಿನಲ್ಲಿ ಸರಿಯಾದ ದಿಕ್ಕಿನಲ್ಲಿ ದೇಶವನ್ನು ಕರೆದೊಯ್ಯಲು ಪ್ರಧಾನಿ ನರೇಂದ್ರ ಮೋದಿಯಂಥ ವ್ಯಕ್ತಿ ಅಗತ್ಯವಿದೆ ಎಂದು ಬಿಜೆಪಿ ಸೇರಿದ ಖುಷ್ಬೂ ಅವರು ಪ್ರತಿಕ್ರಿಯಿಸಿದ್ದಾರೆ.