ಹತ್ರಸ್: ಜಿಲ್ಲಾಧಿಕಾರಿ ವಿರುದ್ಧ ಕ್ರಮ ಜರುಗಿಸದ ಸರಕಾರದ ನೀತಿಗೆ ಹೈಕೋರ್ಟ್ ಗರಂ

ಹತ್ರಸ್ ಜಿಲ್ಲಾಧಿಕಾರಿ ಕ್ರಮವು ಸಂತ್ರಸ್ತೆಯ ಕುಟುಂಬದ ಹಕ್ಕಿನ ಉಲ್ಲಂಘನೆ ಎಂದು ಹೈಕೋರ್ಟ್ ಹೇಳಿದೆ.

ಕಾನೂನು ಹಾಗೂ ನ್ಯಾಯಾಂಗ ಪ್ರಕ್ರಿಯೆಯ ನಿಷ್ಪಕ್ಷಪಾತವನ್ನು ಉಳಿಸುವ ಸಲುವಾಗಿ ಜಿಲ್ಲಾಧಿಕಾರಿ ವಿರುದ್ಧ ಕ್ರಮಕೈಗೊಳ್ಳುವಂತೆ ಹೈಕೋರ್ಟ್ ನ್ಯಾಯಪೀಠ ಸರಕಾರಕ್ಕೆ ಸೂಚಿಸಿದೆ.

ಕರಾವಳಿ ಕರ್ನಾಟಕ ವರದಿ
ಲಕ್ನೊ: ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜಿಲ್ಲಾಧಿಕಾರಿಯನ್ನು ಬಿಟ್ಟು ಕೇವಲ ಎಸ್ಪಿ ವಿರುದ್ಧ ಕ್ರಮಕೈಗೊಂಡಿರುವ ಸರಕಾರದ ನೀತಿಯನ್ನು ಹೈಕೋರ್ಟ್ ಪ್ರಶ್ನಿಸಿದೆ. ಇದೊಂದು ಸಂಘಟಿತ ನಿರ್ಧಾರವಾಗಿದ್ಯಾಗ್ಯೂ ಕೇವಲ ಎಸ್ಪಿ ವಿರುದ್ಧ ಕ್ರಮ ಜರುಗಿಸಿದ್ದರ ಬಗ್ಗೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ರಾತ್ರೋರಾತ್ರಿ ದಲಿತ ಯುವತಿ ಮೃತದೇಹದ ಅಂತ್ಯಸಂಸ್ಕಾರವನ್ನು ಕುಟುಂಬದ ಒಪ್ಪಿಗೆ ಪಡೆಯದೇ ತರಾತುರಿಯಲ್ಲಿ ನಡೆಸಿದ ಹತ್ರಸ್ ಜಿಲ್ಲಾಧಿಕಾರಿ ಕ್ರಮವು ಸಂತ್ರಸ್ತೆಯ ಕುಟುಂಬದ ಹಕ್ಕಿನ ಉಲ್ಲಂಘನೆ ಎಂದು ಹೈಕೋರ್ಟ್ ಹೇಳಿದೆ.

ಧಾರ್ಮಿಕ ವಿಧಿವಿಧಾನಗಳಿಲ್ಲದೇ ಹಠಾತ್ ಅಂತ್ಯಸಂಸ್ಕಾರ ನಡೆಸಿರುವುದು ಮೇಲ್ನೋಟಕ್ಕೆ ಮಾನವ ಹಕ್ಕುಗಳ ಉಲ್ಲಂಘನೆ ಎನಿಸುತ್ತದೆ. ಈ ಸಂಬಂಧ ಅಧಿಕಾರಿಯನ್ನು ಜವಾಬ್ದಾರನನ್ನಾಗಿ ಮಾಡಬೇಕು. ಕಾನೂನು ಹಾಗೂ ನ್ಯಾಯಾಂಗ ಪ್ರಕ್ರಿಯೆಯ ನಿಷ್ಪಕ್ಷಪಾತವನ್ನು ಉಳಿಸುವ ಸಲುವಾಗಿ ಜಿಲ್ಲಾಧಿಕಾರಿ ವಿರುದ್ಧ ಕ್ರಮಕೈಗೊಳ್ಳುವಂತೆ ಎಂದು ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಮತ್ತು ರಾಜನ್ ರಾಯ್ ಅವರನ್ನು ಒಳಗೊಂಡ ಅಲಹಾಬಾದ್ ಹೈಕೋರ್ಟ್ ನ್ಯಾಯಪೀಠ ಸರಕಾರಕ್ಕೆ ಸೂಚಿಸಿದೆ.

ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ ಎಂದು ಸರಕಾರಕ್ಕೆ ನಿರ್ದೇಶಿಸಿದೆ.

 

Get real time updates directly on you device, subscribe now.