ಮೂಡುಬಿದಿರೆ: ಕೋವಿಡ್ ಸೋಂಕಿತ ಶಿಕ್ಷಕಿಯ ಚಿಕಿತ್ಸಾ ವೆಚ್ಚ ಭರಿಸಲಿದೆ ಸರಕಾರ

ಶಿಕ್ಷಕ ದಂಪತಿಗೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಅವರ ಪುತ್ರಿ ಐಶ್ವರ್ಯ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿ ಸಹಾಯ ಕೋರಿದ್ದರು.

‘ವಿದ್ಯಾಗಮ’ ಯೋಜನೆಯಿಂದ ಶಿಕ್ಷಕರಿಗೆ ಕೋವಿಡ್ ಸೋಂಕು ತಗುಲುವ ಸಾಧ್ಯತೆಗಳ ಬಗ್ಗೆ ಜನರು ಆತಂಕ ವ್ಯಕ್ತಪಡಿಸಿದ್ದರು.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಕೋವಿಡ್ ಸೋಕಿತ ಮೂಡುಬಿದಿರೆಯ ಶಿರ್ತಾಡಿಯ ಶಿಕ್ಷಕಿ ಎನ್.ಪದ್ಮಾಕ್ಷಿಯವರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ಮತ್ತು ಚಿಕಿತ್ಸೆಯ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಿಕ್ಷಕ ದಂಪತಿಗೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಅವರ ಪುತ್ರಿ ಐಶ್ವರ್ಯ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿ ಸಹಾಯ ಕೋರಿದ್ದು, ಈ ವಿಷಯ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗೊಳಗಾಗಿ ವ್ಯಾಪಕ ಆತಂಕ ವ್ಯಕ್ತವಾಗಿತ್ತು. ‘ವಿದ್ಯಾಗಮ’ ಯೋಜನೆಯಿಂದ ಶಿಕ್ಷಕರಿಗೆ ಕೋವಿಡ್ ಸೋಂಕು ತಗುಲುವ ಸಾಧ್ಯತೆಗಳ ಬಗ್ಗೆ ಜನರು ಆತಂಕ ವ್ಯಕ್ತಪಡಿಸಿದ್ದರು.

ಈ ವರದಿಗಳನ್ನು ಗಮನಿಸಿದ ತಕ್ಷಣ ಸಚಿವ ಸುರೇಶ್ ಕುಮಾರ್ ಅವರು ದ.ಕ. ಜಿಲ್ಲಾಧಿಕಾರಿ ಮತ್ತು ಶಿಕ್ಷಣ ಇಲಾಖೆ ಉಪನಿರ್ದೇಶಕರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಶಿಕ್ಷಕಿಗೆ ಉತ್ತಮ ಚಿಕಿತ್ಸೆ ನೀಡಲು  ಕ್ರಮಕೈಗೊಳ್ಳುವಂತೆ ಸೂಚಿಸಿದರು.

ದ.ಕ. ಜಿಲ್ಲಾಧಿಕಾರಿ

ಆಸ್ಪತ್ರೆ ಆಡಳಿತ ಮಂಡಳಿಯೊಂದಿಗೆ ದ.ಕ.ಜಿಲ್ಲಾಧಿಕಾರಿ ಚರ್ಚಿಸಿದ್ದು, ರೋಗಿಯಿಂದ ಯಾವುದೇ ಹಣ ಪಡೆಯದೇ ಚಿಕಿತ್ಸೆ ನೀಡಲು ಸೂಚಿಸಿದ್ದಾರೆ. ಬಿಲ್ ಸರಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ದ.ಕ. ಜಿಲ್ಲಾಧಿಕಾರಿ ಶಿಕ್ಷಕಿ ಪದ್ಮಾಕ್ಷಿಯವರ ಪುತ್ರಿ ಐಶ್ವರ್ಯರನ್ನು ಸಂಪರ್ಕಿಸಿ ಅವರ ತಾಯಿಯ ಚಿಕಿತ್ಸೆಯ ಕಾಳಜಿ ಸರಕಾರ ವಹಿಸುತ್ತದೆ. ಆತಂಕ ಬೇಡ ಎಂದು ಸಾಂತ್ವನ ಹೇಳಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ದ.ಕ ಡಿಸಿಯೊಂದಿಗೆ ಈ ವಿಷಯದ ಬಗ್ಗೆ ಮಾತಾಡಿ ಶಿಕ್ಷಕಿಯ ಚಿಕಿತ್ಸೆಗೆ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ.

Get real time updates directly on you device, subscribe now.