ಮುಂಬೈ: ಬಿಲ್ಲವರ ಮಹಾಮಂಡಲ ಸ್ಥಾಪಕಾಧ್ಯಕ್ಷ ಜಯ ಸುವರ್ಣ ನಿಧನ

ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಮಾಜಿ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ.

ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ನಿಕಟವರ್ತಿಯಾಗಿದ್ದ ಜಯ ಸುವರ್ಣ ಅವರು ಬಿಲ್ಲವರ ಸರ್ವಾಂಗೀಣ ಪ್ರಗತಿಯ ಜೊತೆಗೆ ಸೌಹಾರ್ದತೆಗೆ ಶ್ರಮಿಸಿದ ಶಕ್ತಿ.

ಕರಾವಳಿ ಕರ್ನಾಟಕ ವರದಿ
ಮುಂಬೈ: ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಮಾಜಿ ಅಧ್ಯಕ್ಷ, ಬಿಲ್ಲವ ಮಹಾಮಂಡಲದ ಸ್ಥಾಪಕಾಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮೂಲ್ಕಿ ಜಯ ಸಿ.ಸುವರ್ಣ(82) ಬುಧವಾರ ಬೆಳಗಿನ ಜಾವ ನಿಧನ ಹೊಂದಿದ್ದಾರೆ. ಪತ್ನಿ, ನಾಲ್ವರು ಪುತ್ರರು, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರ ನಿಕಟವರ್ತಿಯಾಗಿದ್ದ ಜಯ ಸುವರ್ಣ ಅವರು ಬಿಲ್ಲವರ ಸರ್ವಾಂಗೀಣ ಪ್ರಗತಿಯ ಜೊತೆಗೆ ಸೌಹಾರ್ದತೆಗೆ ಶ್ರಮಿಸಿದ ಶಕ್ತಿಯಾಗಿ ಗುರುತಿಸಿಕೊಂಡಿದ್ದರು.

ಜಯ ಸುವರ್ಣ ಅವರ ಅಂತ್ಯಕ್ರಿಯೆ ಮಧ್ಯಾಹ್ನ 3ಗಂಟೆಗೆ ಮುಂಬೈಯಲ್ಲಿ ನಡೆಯಲಿದೆ.

Get real time updates directly on you device, subscribe now.