ಬಂಟ್ವಾಳ: ಛಾಯಾಗ್ರಾಹಕನ ಮೇಲೆ ತಲವಾರು ದಾಳಿ

ತೃಶಾ ಸ್ಟುಡಿಯೋ ಮಾಲಕ ದಿನೇಶ್ ಕೊಟ್ಟಿಂಜ ಗಂಭೀರ ಗಾಯಗೊಂಡಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಬಂಟ್ವಾಳ: ತಾಲೂಕಿನ ಫರಂಗಿಪೇಟೆಯಲ್ಲಿರುವ ಸ್ಟುಡಿಯೋ ಮಾಲಕರೋರ್ವರ ಮೇಲೆ ತಂಡವೊಂದು ಮಾರಕಾಯುಧಗಳಿಂದ ದಾಳಿಗೈದು ಕೊಲೆ ಯತ್ನ ನಡೆಸಿರುವ ಘಟನೆ ರಾತ್ರಿ ನಡೆದಿದೆ.

ತೃಶಾ ಸ್ಟುಡಿಯೋ ಮಾಲಕ ದಿನೇಶ್ ಕೊಟ್ಟಿಂಜ ಗಂಭೀರ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Get real time updates directly on you device, subscribe now.