ಮಗಳ ಮನೆಯಲ್ಲಿ ಹತ್ತು ವರ್ಷದ ಬಾಲಕಿ ಅತ್ಯಾಚಾರ ಪ್ರಕರಣ: ದೇವಸ್ಥಾನದ ಅರ್ಚಕ ಸೆರೆ

ಆರೋಪಿ ಅರ್ಚಕನ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಆರೋಪಿ ವೆಂಕಟರಮಣಪ್ಪ ತನ್ನ ಪುತ್ರಿಯ ಮನೆಗೆ ಹೋಗಿದ್ದ. ಈ ಸಂದರ್ಭ ದೇವಸ್ಥಾನದ ಬಳಿ ಆಟವಾಡುತ್ತಿದ್ದ ಬಾಲಕಿಗೆ ತಿಂಡಿಯ ಆಮಿಷ ಒಡ್ಡಿ ಮನೆಯೊಳಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ದೇವಸ್ಥಾನದ ಬಳಿ ಆಟವಾಡುತ್ತಿದ್ದ ಹತ್ತು ವರ್ಷದ ಬಾಲಕಿಯನ್ನು ಅತ್ಯಾಚಾರಗೈದ ಪ್ರಕರಣದ ಆರೋಪಿ, ಚಿಕ್ಕಬಳ್ಳಾಪುರದ ಅರ್ಚಕ ವೆಂಕಟರಮಣಪ್ಪ(62) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ದೇವನಹಳ್ಳಿ ಸಮೀಪದ ಚೌಡೇಶ್ವರಿ ದೇವಸ್ಥಾನದ ಬಳಿ ಆಟವಾಡುತ್ತಿದ್ದ ಬಾಲಕಿ ಎರಡು ದಿನಗಳ ಹಿಂದೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಹೂ ಮಾರುತ್ತಿದ್ದ ಮಹಿಳೆಯೋರ್ವರು ನೀಡಿದ ಮಾಹಿತಿಯಂತೆ ಬಾಲಕಿಯನ್ನು ಹುಡುಕಿದಾಗ ಆಕೆ ಪತ್ತೆಯಾಗಿದ್ದಳು. ಪೋಷಕರು ಬಾಲಕಿಯನ್ನು ವಿಚಾರಿಸಿದಾಗ ಅತ್ಯಾಚಾರ ಕೃತ್ಯ ಬೆಳಕಿಗೆ ಬಂದಿದೆ ಎಂದು ದೇವನಹಳ್ಳಿ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿ ಬಾಲಕಿಯನ್ನು ತನ್ನ ಮನೆಯೊಳಗೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ಹೇಳಲಾಗಿದೆ. ಆರೋಪಿ ಅರ್ಚಕನ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಆರೋಪಿ ವೆಂಕಟರಮಣಪ್ಪ ತನ್ನ ಪುತ್ರಿಯ ಮನೆಗೆ ಹೋಗಿದ್ದ. ಈ ಸಂದರ್ಭ ದೇವಸ್ಥಾನದ ಬಳಿ ಆಟವಾಡುತ್ತಿದ್ದ ಬಾಲಕಿಗೆ ತಿಂಡಿಯ ಆಮಿಷ ಒಡ್ಡಿ ಮನೆಯೊಳಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದ. ಈತನ ಅಳಿಯ ಕೂಡ ಅರ್ಚಕರಾಗಿದ್ದಾರೆ. ಸಿಸಿಟಿವಿ ದೃಶ್ಯಗಳು ಮತ್ತು ಹೂ ಮಾರುವ ಮಹಿಳೆ ನೀಡಿದ ಮಾಹಿತಿಯಂತೆ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿದ್ದಾರೆ.

Get real time updates directly on you device, subscribe now.