ಎಪ್ರಿಲ್‌ನಲ್ಲಿ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಸೇರ್ಪಡೆ: ಮಧು ಬಂಗಾರಪ್ಪ

ಈಗ ದೇಶಕ್ಕೆ ಕಾಂಗ್ರೆಸ್ ಪಕ್ಷದ ಅಗತ್ಯ ಇದೆ.

ಸಿದ್ದರಾಮಯ್ಯ ಅವರು ಇಂದಿನಿಂದಲೇ ಕೆಲಸ ಮಾಡಲು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಬೆಳೆಯಲು ಅವಕಾಶವಿದೆ. ಆದ್ದರಿಂದ ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಎಪ್ರಿಲ್ ತಿಂಗಳಿನಲ್ಲಿ ಸೊರಬ ಕ್ಷೇತ್ರದಲ್ಲಿ ಬೃಹತ್ ಸಮಾವೇಶ ಆಯೋಜಿಸಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರುವುದಾಗಿ ಸೊರಬ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರು ಇಂದಿನಿಂದಲೇ ಕೆಲಸ ಮಾಡಲು ಹೇಳಿದ್ದಾರೆ.ಕಾಂಗ್ರೆಸ್ ಪಕ್ಷದಲ್ಲಿ ಬೆಳೆಯಲು ಅವಕಾಶವಿದೆ. ಆದ್ದರಿಂದ ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಶುಕ್ರವಾರ ಭೇಟಿ ಮಾಡಲಿದ್ದೇನೆ ಎಂದರು.

ಸಿದ್ದರಾಮಯ್ಯ ವರನ್ನು ಇಂದು ಭೇಟಿಯಾದ ಬಳಿಕ ಮಧು ಬಂಗಾರಪ್ಪ ಮಾತನಾಡಿದರು.

ಮನಸಾರೆ ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದೇನೆ. ನನ್ನನ್ನು ಕಾಂಗ್ರೆಸ್ ಹೇಗೆ ಉಪಯೋಗಿಸಿಕೊಳ್ಳುತ್ತದೋ ಹಾಗೆ ಕೆಲಸ ಮಾಡುತ್ತೇನೆ. ನಾನು ಜೆಡಿಎಸ್‌ನಲ್ಲಿ ಅಧಿಕಾರ ಅನುಭವಿಸಿಲ್ಲ. ನನ್ನ ನಾಯಕತ್ವ ಎಂದೂ ಸೋಲುವುದಿಲ್ಲ ಎಂದರು. ಈಗ ದೇಶಕ್ಕೆ ಕಾಂಗ್ರೆಸ್ ಪಕ್ಷದ ಅಗತ್ಯ ಇದೆ ಎಂದರು.

ಕುಮಾರಸ್ವಾಮಿಯವರ ಬಗ್ಗೆ ವಯಕ್ತಿಕ ಟೀಕೆ ಮಾಡುವುದಿಲ್ಲ ಎಂದಿದ್ದಾರೆ.

ಈ ನಡುವೆ ಕುಮಾರಸ್ವಾಮಿಯವರು ಜೆಡಿಎಸ್‌ನಿಂದ ಯಾರು ಹೋದರೂ ತೊಂದರೆ ಇಲ್ಲ. ಹೊಸಬರು ಬರುತ್ತಿರುತ್ತಾರೆ. ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸಂಗತಿ ಹಳೆ ವಿಷಯ ಎಂದಿದ್ದಾರೆ.

Get real time updates directly on you device, subscribe now.