ಡಿಕೆಶಿ ಭೇಟಿ ಮಾಡಿದ ಮಧು ಬಂಗಾರಪ್ಪ

ಡಿಕೆಶಿಯವರ ಬೆಂಗಳೂರಿನ ಸದಾಶಿವ ನಗರ ನಿವಾಸದಲ್ಲಿ ಮಧು ಬಂಗಾರಪ್ಪ.

ಡಿ.ಕೆ ಶಿವಕುಮಾರ್ ಮಾರ್ಗದರ್ಶನ ಹಾಗೂ ಸಲಹೆ ಪಡೆದಿರುವುದಾಗಿ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಮಾಜಿ ಶಾಸಕ, ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಇಂದು ಭೇಟಿ ಮಾಡಿದರು.

ಡಿಕೆಶಿಯವರ ಬೆಂಗಳೂರಿನ ಸದಾಶಿವ ನಗರ ನಿವಾಸದಲ್ಲಿ ಮಧು ಬಂಗಾರಪ್ಪ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚಿಸಿದರು. ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿ, ಅವರ ಮಾರ್ಗದರ್ಶನ ಹಾಗೂ ಸಲಹೆ ಪಡೆದಿರುವುದಾಗಿ ಮಧು ಬಂಗಾರಪ್ಪ ತಿಳಿಸಿದ್ದಾರೆ.

Get real time updates directly on you device, subscribe now.