ಸುಳ್ಯ: ಇಲಿ ಪಾಷಾಣ ಸೇವಿಸಿದ್ದ ವಿದ್ಯಾರ್ಥಿನಿ ಮೃತ್ಯು

ಎಲಿಮಲೆ ಸರಕಾರಿ ಹೈಸ್ಕೂಲ್ ಎಂಟನೇ ತರಗತಿ ವಿದ್ಯಾರ್ಥಿನಿ.

ವಾರದ ಹಿಂದೆ ಇಲಿ ಪಾಷಾಣ ಸೇವಿಸಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕರಾವಳಿ ಕರ್ನಾಟಕ ವರದಿ
ಸುಳ್ಯ: ಇಲಿ ಪಾಷಾಣ ಸೇವಿಸಿ ತೀವೃ ಅಸ್ವಸ್ಥಗೊಂಡಿದ್ದ ಹೈಸ್ಕೂಲ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ವರದಿಯಾಗಿದೆ.

ದೇವಚಳ್ಳ ಗ್ರಾಮದ ಮಾವಿನಕಟ್ಟೆ ಈಶ್ವರ ಅವರ ಪುತ್ರಿ ಯಶಸ್ವಿನಿ(13) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಯಶಸ್ವಿನಿ ಎಲಿಮಲೆ ಸರಕಾರಿ ಹೈಸ್ಕೂಲ್ ಎಂಟನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು.

ಈಕೆ ವಾರದ ಹಿಂದೆ ಇಲಿ ಪಾಷಾಣ ಸೇವಿಸಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Get real time updates directly on you device, subscribe now.