ಸಾಬರಮತಿ ಆಶ್ರಮಕ್ಕೆ ಪ್ರಧಾನಿ ಮೋದಿ ಭೇಟಿ: ಗಾಂಧೀಜಿ ಭಾವಚಿತ್ರಕ್ಕೆ ಹೂವಿನ ಹಾರದೊಂದಿಗೆ ನಮನ
ಐತಿಹಾಸಿಕ ಉಪ್ಪಿನ ಸತ್ಯಾಗ್ರಹ ನೆನಪಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಚಾಲನೆ.
ಕೇಂದ್ರ ಸರಕಾರದ ‘ಆಝಾದಿ ಕಾ ಅಮೃತ್ ಮಹೋತ್ಸವ್’ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಕರಾವಳಿ ಕರ್ನಾಟಕ ವರದಿ
ಅಹ್ಮದಾಬಾದ್: ಸಾಬರಮತಿ ಆಶ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿ ಮಹಾತ್ಮಾ ಗಾಂಧೀಜಿ ಭಾವಚಿತ್ರಕ್ಕೆ ಹೂಹಾರ ಹಾಕಿ ನಮಿಸಿದರು. ಪ್ರಧಾನಿಯವರು ಸಂದರ್ಶಕರ ಪುಸ್ತಕದಲ್ಲಿ ಅಭಿಪ್ರಾಯ ನಮೂದಿಸಿದ್ದಾರೆ.
ಮೋದಿಯವರು ಸಾಬರಮತಿ ಆಶ್ರಮದಲ್ಲಿ ಐತಿಹಾಸಿಕ ಉಪ್ಪಿನ ಸತ್ಯಾಗ್ರಹ ನೆನಪಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ ಕೇಂದ್ರ ಸರಕಾರದ ‘ಆಝಾದಿ ಕಾ ಅಮೃತ್ ಮಹೋತ್ಸವ್’ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.