ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ವೀರಪ್ಪ ಮೊಯಿಲಿ ಅವರ ‘ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ’ ಮಹಾಕಾವ್ಯ ಆಯ್ಕೆಯಾಗಿದೆ.
ಪ್ರಶಸ್ತಿಗಳ ಕಡೆಗೆ ಗಮನ ಕೊಡದೇ ಕರ್ತವ್ಯ ಮಾಡಿಕೊಂಡು ಬಂದಿದ್ದೇವೆ ಎಂದು ವೀರಪ್ಪ ಮೊಯ್ಲಿ ಪ್ರತಿಕ್ರಿಯಿಸಿದ್ದಾರೆ.
ಕರಾವಳಿ ಕರ್ನಾಟಕ ವರದಿ
ನವ ದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದ್ದು, ಕನ್ನಡ ಭಾಷೆಯಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಸಾಹಿತಿ ವೀರಪ್ಪ ಮೊಯಿಲಿ ಅವರ ‘ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ’ ಮಹಾಕಾವ್ಯ ಆಯ್ಕೆಯಾಗಿದೆ.
ಪ್ರಶಸ್ತಿ ಒಂದು ಲಕ್ಷ ರೂ. ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಮಹಾಕಾವ್ಯವನ್ನು ಗುರುತಿಸಿ ಮನ್ನಣೆ ನೀಡಿರುವುದು ಕಾವ್ಯಕ್ಕೆ ಸಿಕ್ಕ ಪುರಸ್ಕಾರ. ಪ್ರಶಸ್ತಿಗಳ ಕಡೆಗೆ ಗಮನ ಕೊಡದೇ ಕರ್ತವ್ಯ ಮಾಡಿಕೊಂಡು ಬಂದಿದ್ದೇವೆ ಎಂದು ವೀರಪ್ಪ ಮೊಯ್ಲಿ ಪ್ರತಿಕ್ರಿಯಿಸಿದ್ದಾರೆ.
ಬಾಲ ಸಾಹಿತ್ಯ ಪುರಸ್ಕಾರ ವಿಭಾಗದಲ್ಲಿ ಲೇಖಕ ಹ.ಸ. ಬ್ಯಾಕೋಡ ಅವರ ‘ನಾನೂ ಅಂಬೇಡ್ಕರ್’ ಕಾದಂಬರಿಗಾಗಿ, ಯುವ ಪುರಸ್ಕಾರ ವಿಭಾಗದಲ್ಲಿ ‘ಧೂಪದ ಮಕ್ಕಳು’ ಸಣ್ಣ ಕಥೆಗಳಿಗಾಗಿ ಕೆ.ಎಸ್.ಮಹದೇವಸ್ವಾಮಿ(ಸ್ವಾಮಿ ಪೊನ್ನಾಚ್ಚಿ) ಅವರಿಗೆ ಪ್ರಶಸ್ತಿ ಪ್ರಕಟಿಸಲಾಗಿದೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಚಂದ್ರಶೇಖರ ಕಂಬಾರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ.