ಮಂಗಳೂರು ವಿಮಾನ ನಿಲ್ದಾಣದಲ್ಲಿ 33.75ಲಕ್ಷ ರೂ. ಮೌಲ್ಯದ ಚಿನ್ನ ವಶ

ದುಬೈಯಿಂದ ಏರ್ ಇಂಡಿಯಾ ವಿಮಾನದಲ್ಲಿ ಬಂದ ವ್ಯಕ್ತಿ.

ಕಸ್ಟಮ್ಸ್ ಉಪ ಆಯುಕ್ತ ಅವಿನಾಶ್ ಕಿರಣ ರಂಗೋಲಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ

ಕರಾವಳಿ ಕರ್ನಾಟಕ ವರದಿ
ಮಂಗಳೂರು: ದುಬೈಯಿಂದ ಏರ್ ಇಂಡಿಯಾ ವಿಮಾನದಲ್ಲಿ ಬಂದ ವ್ಯಕ್ತಿಯೋರ್ವ ಒಳಉಡುಪಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 737ಗ್ರಾಂ. ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಆರೋಪಿ ಕೇರಳದ ಮಮ್ಮಿನಿ ಖಾಲಿದ್(45) ಎಂಬಾತನನ್ನು ಬಂಧಿಸಲಾಗಿದೆ.

ಚಿನ್ನದ ಮೌಲ್ಯ 33.75ಲಕ್ಷ ರೂ. ಆಗಿದೆ.

ಕಸ್ಟಮ್ಸ್ ಉಪ ಆಯುಕ್ತ ಅವಿನಾಶ್ ಕಿರಣ ರಂಗೋಲಿ ಅವರ ನೇತೃತ್ವದಲ್ಲಿ ಭೂಮ್ಕರ್, ರಾಕೇಶ್ ಕುಮಾರ್, ಬಿಕ್ರಮ್ ಚಕ್ರವರ್ತಿ ತಂಡ ಕಾರ್ಯಾಚರಣೆ ನಡೆಸಿತ್ತು.

Get real time updates directly on you device, subscribe now.