ಕೋವಿಶೀಲ್ಡ್ ಲಸಿಕೆಯಿಂದ ಗಂಭೀರ ಅಡ್ಡಪರಿಣಾಮ: ಹತ್ತು ದೇಶಗಳಲ್ಲಿ ಲಸಿಕೆ ನಿಷೇಧ

ಯುರೋಪಿಯನ್ ದೇಶಗಳಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದಿರುವವರಲ್ಲಿ ಗಂಭೀರ ಸ್ವರೂಪದ ರಕ್ತ ಹೆಪ್ಪುಗಟ್ಟುವ ಸಮಸ್ಯೆಗಳು ಕಂಡುಬಂದಿವೆ.

ಭಾರತದಂತೆ ಬ್ರಿಟನ್‌ನಲ್ಲೂ ಕೋವಿ ಶೀಲ್ಡ್ ಲಸಿಕೆಯನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ.

ಕರಾವಳಿ ಕರ್ನಾಟಕ ವರದಿ
ನವದೆಹಲಿ: ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಬಳಸಲಾಗುತ್ತಿರುವ ಕೋವಿಶೀಲ್ಡ್ ಲಸಿಕೆ ಬಳಕೆಯಿಂದ ಗಂಭೀರ ಸ್ವರೂಪದ ಅಡ್ಡ ಪರಿಣಾಮಗಳಾಗುತ್ತಿವೆ ಎಂದು ಆರೋಪಿಸಿ ಹತ್ತು ಯುರೋಪಿಯನ್ ದೇಶಗಳು ಈ ಲಸಿಕೆಯ ಬಳಕೆಯನ್ನು ನಿಷೇಧಿಸಿರುವ ಕಳವಳಕಾರಿ ಸಂಗತಿ ವರದಿಯಾಗಿದೆ.

ಕೋವಿಶೀಲ್ಡ್ ಲಸಿಕೆ ಪಡೆದಿರುವವರಲ್ಲಿ ಗಂಭೀರ ಸ್ವರೂಪದ ರಕ್ತ ಹೆಪ್ಪುಗಟ್ಟುವ ಸಮಸ್ಯೆಗಳು ಕಂಡುಬಂದಿವೆ.

ನಾರ್ವೆ, ಐಲೆಂಡ್, ಆಸ್ಟ್ರಿಯಾ, ಎಸ್ಟೋನಿಯಾ, ಲಿಥುವೇನಿಯಾ, ಲಕ್ಸೆಂಬರ್ಗ್, ಇಟಲಿ, ಲಾಟ್ವಿಯಾದಲ್ಲಿ ಕೋವಿಶೀಲ್ಡ್ ಬಳಕೆಗೆ ನಿಷೇಧ ಹೇರಲಾಗಿದೆ.

ಈಗ ಡೆನ್ಮಾರ್ಕ್ ನಲ್ಲಿಯೂ ಲಸಿಕೆಯನ್ನು ಎರಡು ವಾರ ಬಳಸದಂತೆ ಸೂಚಿಸಲಾಗಿದೆ.

ಭಾರತದಂತೆ ಬ್ರಿಟನ್‌ನಲ್ಲೂ ಕೋವಿ ಶೀಲ್ಡ್ ಲಸಿಕೆಯನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಕೇಂದ್ರ ಆರೋಗ್ಯ ಇಲಾಖೆ ಲಸಿಕೆಯಿಂದಾಗಿ ಉಂಟಾಗುವ ರೋಗ ನಿರೋಧಕ ಶಕ್ತಿ ಮತ್ತು ಪ್ರತಿಕೂಲ ಪರಿಣಾಮಗಳ ಕುರಿತು ಪರಿಶೀಲನೆ ನಡೆಸಿ ನಿರ್ಣಯಿಸಲಿದೆ ಎಂದು ತಿಳಿದುಬಂದಿದೆ.

ಲಸಿಕೆ ಪಡೆದವರ ಆರೋಗ್ಯ ಪರಿಶೀಲನೆ ಮಾಡಲಾಗುತ್ತಿದ್ದು, ರಕ್ತ ಹೆಪ್ಪುಗಟ್ಟುವಿಕೆ ಕುರಿತು ವರದಿ ಮಾಡುವಂತೆ ಸೂಚಿಸಲಾಗಿದೆ ಎಂದು ಎಇಎಫ್‌ಐ ಸಮಿತಿಯ ಸಲಹೆಗಾರ ನರೇಂದ್ರ ಅರೋರಾ ಹೇಳಿದ್ದಾರೆ.

ಭಾರತದಲ್ಲಿ ಕೋವಿಡ್ ಲಸಿಕೆ ಪಡೆದಿರುವವರಲ್ಲಿ ಶೇ.90ಕ್ಕಿಂತ ಹೆಚ್ಚಿನ ಮಂದಿಗೆ ಕೋವಿ ಶೀಲ್ಡ್ ಲಸಿಕೆ ಹಾಕಲಾಗಿದೆ.

ವಿಶ್ವ ಆರೋಗ್ಯ ಸಂಸ್ಛೆಯು ಪ್ರಾಥಮಿಕ ವರದಿಯಲ್ಲಿ ಲಸಿಕೆ ಮತ್ತು ಹೆಪ್ಪುಗಟ್ಟುವಿಕೆಯ ನಡುವೆ ಯಾವುದೇ ಸಂಬಂಧವಿಲ್ಲ. ಲಸಿಕೆ ಬಳಕೆ ಮೇಲೆ ನಿಷೇಧ ಹೇರಲು ಯಾವುದೇ ಕಾರಣಗಳಿಲ್ಲ ಎಂದಿದೆ.

 

 

 

Get real time updates directly on you device, subscribe now.