ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ವಿಡಿಯೋ ಬಿಡುಗಡೆ ಮಾಡಿದ ಸಂತ್ರಸ್ತೆ

ರಮೇಶ್ ಜಾರಕಿಹೊಳಿಯವರೇ ವಿಡಿಯೋ ಬಿಡುಗಡೆ ಮಾಡಿದ್ದಾರೆ ಎಂದು ದೂರಿದ್ದಾರೆ.

ನನ್ನ ಕುಟುಂಬಕ್ಕೆ ರಕ್ಷಣೆ ಒದಗಿಸಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರನ್ನು ಕೋರಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಈ ವಿಡೀಯೋದಿಂದ ನನ್ನ ಮಾನವೇ ಹೋಗಿದೆ. ನನ್ನ ತಂದೆ-ತಾಯಿ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾನು ಕೂಡ ಹಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ ಎಂದು ಸಿಡಿಯಲ್ಲಿದ್ದಾರೆ ಎನ್ನಲಾದ ಸಂತ್ರಸ್ತ ಯುವತಿ ಇದೇ ಮೊದಲ ಬಾರಿ ವಿಡಿಯೋ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಉದ್ಯೋಗದ ಆಮಿಷ ಒಡ್ಡಿ ನನಗೆ ವಂಚಿಸಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ರಮೇಶ್ ಜಾರಕಿಹೊಳಿಯವರೇ ವಿಡಿಯೋ ಬಿಡುಗಡೆ ಮಾಡಿದ್ದಾರೆ ಎಂದು ದೂರಿದ್ದಾರೆ. ನನಗೆ ಯಾವುದೇ ರಾಜಕೀಯ ನಾಯಕರ ಬೆಂಬಲವಿಲ್ಲ ಎಂದಿರುವ ಸಂತ್ರಸ್ತ ಯುವತಿ, ನನ್ನ ಕುಟುಂಬಕ್ಕೆ ರಕ್ಷಣೆ ಒದಗಿಸಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರನ್ನು ಕೋರಿದ್ದಾರೆ.

Get real time updates directly on you device, subscribe now.