ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ: ಕನ್ನಡಿಗ ದೇವದತ್ ಪಡಿಕ್ಕಲ್‌ಗೆ ಸಿಗಬಹುದೆ ಅವಕಾಶ?

ವಿಜಯ್ ಹಜಾರೆ ಟ್ರೋಫಿಯಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದ ಪಡಿಕ್ಕಲ್.

ಕರ್ನಾಟಕದ ಆರಂಭಿಕ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್‌ಗೆ ನಿರೀಕ್ಷೆಗಳು ಗರಿಗೆದರಿವೆ.

ಕರಾವಳಿ ಕರ್ನಾಟಕ ವರದಿ
ನವ ದೆಹಲಿ: ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಏಕದಿನ ಸರಣಿಗಾಗಿ ಭಾರತ ಕ್ರಿಕೆಟ್ ತಂಡದ ಆಯ್ಕೆ ಇಂದು ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದ್ದು, ಕರ್ನಾಟಕದ ಆರಂಭಿಕ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್‌ಗೆ ಅವಕಾಶ ಸಿಗಬಹುದೆ ಎಂಬ ನಿರೀಕ್ಷೆಗಳು ಗರಿಗೆದರಿವೆ.

ವಿಜಯ್ ಹಜಾರೆ ಟ್ರೋಫಿಯಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದ ಪಡಿಕ್ಕಲ್, ಸತತ ನಾಲ್ಕು ಶತಕಗಳ ಸಾಧನೆಗೈದಿದ್ದರು. ರನ್ ಗಳಿಕೆಯಲ್ಲಿ ಎರಡನೇ ಸ್ಥಾನದಲ್ಲಿರುವ ಪಡಿಕ್ಕಲ್ ಏಳು ಪಂದ್ಯಗಳಲ್ಲಿ 147.40ರ ಸರಾಸರಿಯಲ್ಲಿ 737ರನ್ ಕಲೆ ಹಾಕಿದ್ದರು.

ಟ್ವೆಂಟಿ-ಟ್ವೆಂಟಿ ವಿಶ್ವಕಪ್‌ಗೆ ತಯಾರಿ ನಡೆಸುತ್ತಿರುವುದರಿಂದ ತಂಡದಲ್ಲಿ ಹೆಚ್ಚಿನ ಬದಲಾವಣೆಗಳನ್ನು ನಿರೀಕ್ಷಿಸುವಂತಿಲ್ಲ ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ.

Get real time updates directly on you device, subscribe now.