ರಾಜ್ಯದಲ್ಲಿ ಕೋವಿಡ್ ನಿಯಂತ್ರಿಸಲು ಕರ್ಪ್ಯೂ/ನೈಟ್ ಕರ್ಪ್ಯೂ ಜಾರಿ ಬಗ್ಗೆ ಚರ್ಚೆ ಆಗಿಲ್ಲ: ಬೊಮ್ಮಾಯಿ
ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂಬ ವರದಿಗಳ ಹಿನ್ನೆಲೆ.
ಮಾ.15ರಂದು ಮುಖ್ಯಮಂತ್ರಿ ಕರೆದ ಸಭೆಯಲ್ಲಿ ಏನು ಚರ್ಚೆ ಆಗುತ್ತದೋ ನೋಡೋಣ ಎಂದಿದ್ದಾರೆ.
ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣ ಕ್ರಮವಾಗಿ ಕರ್ಪ್ಯೂ ಅಥವಾ ರಾತ್ರಿ ಕರ್ಪ್ಯೂ ಜಾರಿ ಬಗ್ಗೆ ಈವರೆಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿಎಸ್‌ವೈ ಮಾ.15ರಂದು ಸಚಿವರ ಸಭೆ ಕರೆದಿದ್ದು, ಅಲ್ಲಿ ಏನು ಚರ್ಚೆ ಆಗುತ್ತದೋ ನೋಡೋಣ ಎಂದಿದ್ದಾರೆ. ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಕ್ರಮಗಳು ಜಾರಿಯಲ್ಲಿವೆ ಎಂದರು.
ಮುಖ್ಯಮಂತ್ರಿ ಕರೆದ ಸಭೆಯಲ್ಲಿ ಕೋವಿಡ್ ನಿಯಂತ್ರಿಸಲು ವಹಿಸಬೇಕಾದ ಎಚ್ಚರಿಕೆ ಕ್ರಮಗಳನ್ನು ಮತ್ತೆ ಬಿಗಿಗೊಳಿಸುವ ಬಗ್ಗೆ ಚರ್ಚಿಸುವುದರ ಜೊತೆ ಕೆಲ ಕಠಿಣ ಕ್ರಮಗಳನ್ನೂ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಸರಕಾರಿ ಮೂಲಗಳು ತಿಳಿಸಿವೆ.