ರಮೇಶ ಜಾರಕಿಹೊಳಿ ಸಿಡಿಯಲ್ಲಿರುವ ಯುವತಿ ಅಪಹರಣ
ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.
ಸಂತ್ರಸ್ತ ಯುವತಿಯ ತಂದೆ ಎಪಿಎಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ.
ಕರಾವಳಿ ಕರ್ನಾಟಕ ವರದಿ
ಬೆಳಗಾವಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಯವರದ್ದು ಎನ್ನಲಾದ ಸಿಡಿಯಲ್ಲಿರುವ ಯುವತಿಯನ್ನು ಅಪಹರಿಸಲಾಗಿದೆ ಎಂದು ಆಕೆಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.
ಸಂತ್ರಸ್ತ ಯುವತಿಯ ತಂದೆ ಎಪಿಎಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ. ಮಾರ್ಕೆಟ್ ಎಸಿಪಿ ಮತ್ತು ಎಪಿಎಂಸಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನೇತೃತ್ವದ ತಂಡ ತನಿಖೆ ತನಿಖೆ ನಡೆಸುತ್ತಿದೆ.
ತನಿಖಾ ತಂಡ ಯುವತಿಯನ್ನು ಪತ್ತೆಹಚ್ಚಲು ಬೆಂಗಳೂರಿಗೆ ತೆರಳುವ ಸಾಧ್ಯತೆ ಇದೆ.