ಕೋವಿಡ್ ಲಸಿಕೆ ಪಡೆದಿದ್ದ ಸಿಎಂ ಯಡಿಯೂರಪ್ಪಗೆ ಮತ್ತೆ ಕೋವಿಡ್

ಲಾಕ್‌ಡೌನ್ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಕೋವಿಡ್ ಸೋಂಕಿಗೆ ಒಳಗಾಗಿದ್ದು, ಚಿಕಿತ್ಸೆಯಿಂದ ಗುಣಮುಖರಾಗಿದ್ದರು.

ಮುಖ್ಯಮಂತ್ರಿಗಳು ಇತ್ತೀಚೆಗಷ್ಟೇ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದರು.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮತ್ತೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ದಿನಗಳಿಂದ ಸಿಎಂ ಜ್ವರದಿಂದ ಬಳಲಿದ್ದರು.

ಜ್ವರದ ಹಿನ್ನಲೆಯಲ್ಲಿ ಇಂದು ತಪಾಸಣೆಗೆ ಒಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿದ್ದವರು  ಕ್ವಾರಂಟೈನ್ ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ ಎಂದು ಸಿಎಂ ಟ್ವೀಟ್ ತಿಳಿಸಿದೆ.

ಹಿಂದೆ ಲಾಕ್‌ಡೌನ್ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಕೋವಿಡ್ ಸೋಂಕಿಗೆ ಒಳಗಾಗಿದ್ದು, ಚಿಕಿತ್ಸೆಯಿಂದ ಗುಣಮುಖರಾಗಿದ್ದರು.

ಮುಖ್ಯಮಂತ್ರಿಗಳು ಇತ್ತೀಚೆಗಷ್ಟೇ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದರು. ಕೋವ್ಯಾಕ್ಸಿನ್ ಕೋವಿಡ್ ಲಸಿಕೆಯನ್ನು ಯಡಿಯೂರಪ್ಪ ಅವರಿಗೆ ಹಾಕಲಾಗಿತ್ತು. ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದ ಸಿಎಂ, ನಾವೆಲ್ಲರೂ ಭಾರತ ಮತ್ತು ಕರ್ನಾಟಕವನ್ನು ಕೋವಿಡ್ ಮುಕ್ತವಾಗಿಸಲು ಕೈಜೋಡಿಸೋಣ.  ಅರ್ಹರು ತಮ್ಮ ಹೆಸರು ನೊಂದಾಯಿಸಿ ಶೀಘ್ರ ಲಸಿಕೆ ಪಡೆಯುವಂತೆ ಮನವಿ ಮಾಡಿದ್ದರು.

Get real time updates directly on you device, subscribe now.