ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ: ಕುಂದಾಪುರದಲ್ಲಿ ಮಣಿಪಾಲ ಆರೋಗ್ಯ ಕಾರ್ಡ್ ನೋಂದಾವಣೆಗೆ ಚಾಲನೆ

ಮಣಿಪಾಲ್ ಕಾರ್ಡ್ “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಈ ವರ್ಷದ ದ್ಯೇಯ ವಾಕ್ಯ

ಕರಾವಳಿ ಕರ್ನಾಟಕ ವರದಿ
ಕುಂದಾಪುರ: ಎಲ್ಲ ರೀತಿಯ ರೋಗಿಗಳಿಗೆ ಯಾವುದೇ ವಿಧದ ನಿರ್ಬಂಧಗಳಿಲ್ಲದೆ ಸಮಾಲೋಚನೆ, ಚಿಕಿತ್ಸೆ ಸೇರಿದಂತೆ ಹಲವು ಆರೋಗ್ಯ ಸೇವೆಗಳಿಗೆ ತಗಲುವ ವೆಚ್ಚಗಳಲ್ಲಿ ರಿಯಾಯಿತಿಯನ್ನು ಒದಗಿಸುವ ಮಣಿಪಾಲ ಆರೋಗ್ಯ ಕಾರ್ಡ್ ನೋಂದಾವಣೆಗೆ ಕುಂದಾಪುರದಲ್ಲಿ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಉಪ ವ್ಯವಸ್ಥಾಪಕ ಕೃಷ್ಣಪ್ರಸಾದ್ “ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಮಣಿಪಾಲ ಆರೋಗ್ಯ ಕಾರ್ಡ್ ಯಶಸ್ವೀ 20 ವರ್ಷಗಳನ್ನು ಪೂರೈಸಿದೆ. ಕಳೆದ 20 ವರ್ಷಗಳಲ್ಲಿ, ನಾವು ಸಾಮಾಜಿಕ ಕಾಳಜಿಯೊಂದಿಗೆ ಉತ್ಕ್ರಷ್ಟ ಗುಣಮಟ್ಟದ ಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ನೀಡುತ್ತಿದ್ದೇವೆ. ಮಣಿಪಾಲ್ ಕಾರ್ಡ್ “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಈ ವರ್ಷದ ದ್ಯೇಯ ವಾಕ್ಯ” ಎಂದು ಹೇಳಿದರು.

ಅವಿಭಜಿತ ದಕ್ಸಿಣ ಕನ್ನಡ ಜಿಲ್ಲೆಯ ಜನರಿಗೆ ಆರಂಭಿಸಿದ ಈ ಯೋಜನೆ ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ ಸೇರಿದಂತೆ ಕರಾವಳಿ ಕರ್ನಾಟಕದ ಮತ್ತು ಮಧ್ಯ ಕರ್ನಾಟಕದ ಸುಮಾರು 12ಕ್ಕೂ ಹೆಚ್ಚು ಜಿಲ್ಲೆಗಳಿಗೆ ವಿಸ್ತರಣೆಯಾಗಿದೆ. ಅಲ್ಲದೇ ಕೇರಳ, ಗೋವಾದಂತಹ ನೆರೆ ರಾಜ್ಯಗಳಿಗೂ ವಿಸ್ತರಣೆ ಆಗಿದೆ ಎಂದು ಅವರು ಹೇಳಿದರು.

ಕುಂದಾಪುರದಲ್ಲಿ ಪತ್ರಕರ್ತರ ಸಂಘದ ಸದಸ್ಯರಿಗೆ ಉಚಿತವಾಗಿ ನೀಡುವ ಮಣಿಪಾಲ ಆರೋಗ್ಯ ಕಾರ್ಡ್ ಅನ್ನು ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ ಅವರಿಗೆ ಸಾಂಕೇತಿಕವಾಗಿ ಹಸ್ತಾಂತರಿಸಲಾಯಿತು.

ಕಾರ್ಡಿನ ವಿವರಗಳು ಮತ್ತು ವೈಶಿಷ್ಟ್ಯಗಳು
1 ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ರೂ 300/-, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ರೂ600/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ರೂ750/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರೂ500/-, ಕುಟುಂಬಕ್ಕೆ ರೂ800/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ರೂ950/- ಆಗಿರುತ್ತದೆ.

ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಈ ಕೆಳಗಿನ ರಿಯಾಯಿತಿ ಸೌಲಭ್ಯ ಪಡೆಯಬಹುದು.

ಹೊರ ರೋಗಿ ವಿಭಾಗದಲ್ಲಿ ಒಳ ರೋಗಿ ವಿಭಾಗದಲ್ಲಿ
ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆ ಯಲ್ಲಿ ಶೇಕಡಾ 50 ರಿಯಾಯಿತಿ
ಪ್ರಯೋಗಾಲಯ ಪರೀಕ್ಷೆ ಯಲ್ಲಿ ಶೇಕಡಾ 30 ರಿಯಾಯಿತಿ
ಸಿ ಟಿ, ಎಂ ಆರ್ ಐ, ಅಲ್ಟ್ರಾಸೌಂಡ್ ಗಳಲ್ಲಿ ಶೇಕಡಾ 20 ರಿಯಾಯಿತಿ
ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇಕಡಾ 20 ರಿಯಾಯಿತಿ
ಔಷಧಾಲಯಗಳಲ್ಲಿ ಶೇಕಡಾ 12ರವರೆಗೆ ರಿಯಾಯಿತಿ

ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇಕಡಾ 25 ರಿಯಾಯಿತಿ,
ಕೋವಿಡ್ ರೋಗಿಗಳಿಗೆ ಜನರಲ್ ವಾರ್ಡ್ ನಲ್ಲಿ ರೋಗಿಗಳಿಗೆ ಸರ್ಕಾರ ಅನುಮೋದಿತ ಪ್ಯಾಕೇಜ್ ಮೇಲೆ ಶೇಕಡಾ 10 ರಿಯಾಯಿತಿ ಪಡೆಯಬಹುದಾಗಿದೆ.

ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ್ ಗ್ರೂಪ್ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಇದರಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ ಪೈ ಆಸ್ಪತ್ರೆ ಉಡುಪಿ ಮತ್ತು ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು ಮತ್ತು ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ ಕಟೀಲ್ ಮತ್ತು ಮಣಿಪಾಲ್ ಆಸ್ಪತ್ರೆ ಗೋವಾ, ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾಯಿತಿ ಪ್ರಯೋಜನಗಳನ್ನು ಪಡೆಯಬಹುದು.

ಮಣಿಪಾಲ ಆರೋಗ್ಯ ಕಾರ್ಡ್ ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು.

ಪತ್ರಿಕಾಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಹಿರಿಯ ವ್ಯವಸ್ಥಾಪಕರಾದ ಕೆ. ಸಚಿನ್ ಕಾರಂತ್, ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಪ್ರತಿನಿಧಿ ಉಪಸ್ಥಿತರಿದ್ದರು. ರಾಜೇಂದ್ರ ನಾಯ್ಕ್ ಸ್ವಾಗತಿಸಿದರು.

ಮಣಿಪಾಲ ಆರೋಗ್ಯ ಕಾರ್ಡಿನ ಪ್ರತಿನಿಧಿಯಾಗಬೇಕಾದಲ್ಲಿ ಅಕ್ಷಯ್ ಕುಮಾರ್ ಅವರನ್ನು 9740891816 ಸಂಪರ್ಕಿಸಬಹುದಾಗಿದೆ.

2021ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:
ಕಸ್ತೂರ್ಬಾ ಆಸ್ಪತ್ರೆ ಮಾಹಿತಿ ಕೇಂದ್ರ, ಕುಂದಾಪುರ ನಾಗರಾಜ್ ಖಾರ್ವಿ– 9916888916, ರಕ್ಷಿತ್ ಕುಮಾರ್ – 9743366746, ಸುರೇಖಾ ಪೈ ಕೋಟ – 9880374926 ಕೋಟ ಸಹಕಾರಿ ವ್ಯವಸಾಯಕ ಸಂಘ (ನಿ) – 8453364342, ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ – 8884459066

Get real time updates directly on you device, subscribe now.