ಕುಂದಾಪುರ: ಸಿಎ, ಸಿಎಸ್ ಫೌಂಡೇಶನ್ ತರಗತಿಗಳ ಉದ್ಘಾಟನೆ
ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ತರಗತಿಗಳು ಮಾರ್ಚ್ 23 ರಿಂದ ಆರಂಭಗೊಳ್ಳಲಿವೆ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ ಸಂಸ್ಥೆಯ ಸಹಯೋಗದೊಂದಿಗೆ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿಎ,ಸಿಎಸ್ ಫೌಂಡೇಶನ್ ತರಬೇತಿ ತರಗತಿಗಳ ಉದ್ಘಾಟನೆ ನೆರವೇರಿತು. ತರಗತಿಗಳು ಮಾರ್ಚ್ 23 ರಿಂದ ಆರಂಭಗೊಳ್ಳಲಿವೆ.
ಈ ಸಂದರ್ಭದಲ್ಲಿ ಅಖಿಲ ಭಾರತ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅದ್ಯಕ್ಷತೆಯನ್ನು ವಹಿಸಿದ್ದ ಶ್ರೀ ವೆಂಕಟರಮಣ ದೇವ ಶೈಕಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಕಾರ್ಯದರ್ಶಿ ಕೆ ರಾಧಾಕೃಷ್ಣ ಶೆಣೈ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಎಂ.ಐ.ಟಿ. ಮಣಿಪಾಲ ಇದರ ಸಹನಿರ್ದೇಶಕರಾದ ಕೆ ನಾರಾಯಣ ಶೆಣೈ ಮುಖ್ಯ ಅತಿಥಿಗಳಾಗಿದ್ದು, ಶಿಕ್ಷಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ ಸಂಸ್ಥೆಯ ಮುಖ್ಯಸ್ಥರಾದ ಭರತ್ ಶೆಟ್ಟಿ, ಶ್ರೀ ವೆಂಕಟರಮಣ ದೇವ ಶೈಕಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಖಜಾಂಚಿ ಕೆ. ಲಕ್ಷ್ಮಿನಾರಾಯಣ ಶೆಣೈ, ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ, ಪ್ರೌಢಶಾಲಾ ಮುಖ್ಯಸ್ಥರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಪ್ರಮೀಳಾ ಡಿಸೋಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.