ಜೂ.25ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ: ಸುರೇಶ್ ಕುಮಾರ್

ಜೂನ್.18ರಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಯಲಿದೆ ಎಂದರು.

ಸಮಾಜ ಕಲ್ಯಾಣ ಶಾಲೆಗಳನ್ನು ಕ್ವಾರಂಟೈನ್ ಮಾಡಿರುವುದರಿಂದ ಅಂಥ ಕೇಂದ್ರದ ವಿದ್ಯಾರ್ಥಿಗಳಿಗೆ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗುವುದೆಂದು ಸಚಿವರು ತಿಳಿಸಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಜು.25ರಿಂದ ಜುಲೈ4ರ ವರೆಗೆ ಎಸೆಸೆಲ್ಸಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಜೂನ್.18ರಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಯಲಿದೆ ಎಂದರು. ಈಗಿನ ಪರಿಸ್ಥಿತಿಯಲ್ಲಿ ಹೆಚ್ಚುವರಿ ಕೊಠಡಿಗಳನ್ನು ಬಳಸಲಾಗುವುದು ಎಂದರು.

8,48,196 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 2879 ಪರೀಕ್ಷಾ ಕೇಂದ್ರಗಳಲ್ಲಿ 43,720 ಕೋಣೆಗಳನ್ನು ಬಳಸಲಾಗುತ್ತಿದ್ದು, ಸಾಮಾಜಿಕ ಅಂತರಕ್ಕೆ ಒತ್ತುಕೊಟ್ಟು ಆಸನ ವ್ಯವಸ್ಥೆ ಮಾಡಲಾಗುವುದು.

ಜ್ವರದ ಲಕ್ಷಣಗಳಿದ್ದರೆ ಪ್ರತ್ಯೇಕ ಕೋಣೆ ವ್ಯವಸ್ಥೆ ಸೇರಿದಂತೆ ಸ್ಯಾನಿಟೈಸರ್‌ಗಳನ್ನು ಎಲ್ಲ ಕೇಂದ್ರಗಳಲ್ಲಿ ಬಳಸಲಾಗುತ್ತದೆ. ಎಂಬೆಸಿ ಗ್ರೂಪ್ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸರ್ ಒದಗಿಸಲಿದೆ.

ಸಮಾಜ ಕಲ್ಯಾಣ ಶಾಲೆಗಳನ್ನು ಕ್ವಾರಂಟೈನ್ ಮಾಡಿರುವುದರಿಂದ ಅಂಥ ಕೇಂದ್ರದ ವಿದ್ಯಾರ್ಥಿಗಳಿಗೆ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗುವುದೆಂದು ಸಚಿವರು ತಿಳಿಸಿದ್ದಾರೆ.

ಭಾರತ್ ಸ್ಕೌಟ್ಸ್ ಮತ್ತು ರಾಮಕೃಷ್ಣ ಮಿಶನ್ ಮಾಸ್ಕ್ ನೀಡಲಿವೆ.

Get real time updates directly on you device, subscribe now.